ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ಸಿಂಧೂ ನದಿ ತಪ್ಪಲಿನ ಪಾರಿಸಾರಿಕ ಹಾಗೂ ಅಭಿವೃದ್ಧಿಯ ಸಮಸ್ಯೆಗಳು

ಸಿಂಧೂ ನದಿ ತಪ್ಪಲಿನಲ್ಲಿ ಪ್ರಸ್ತುತವಿರುವ ಅತ್ಯಂತ ಗಹನವಾದ ಪಾರಿಸಾರಿಕ ಹಾಗೂ ಅಭಿವೃದ್ಧಿಯ ಸಮಸ್ಯೆಗಳನ್ನು ಕುರಿತಾಗಿ ವರದಿ ಮಾಡುವ ಅವಕಾಶವನ್ನು ಕುರಿತಾಗಿ ಪತ್ರಕರ್ತರೊಂದಿಗೆ ಹಂಚಿಕೊಳ್ಳಲು ನಾವು ಇಚ್ಛಿಸುತ್ತೇವೆ.  ಇಂಟರ್ನ್ಯಾಷನಲ್ ವಾಟರ್ ಮಾನೇಜ್ಮೆಂಟ್ ಇನ್ಸ್ಟಿಟ್ಯೂಟ್ (ಐ.ಡಬ್ಲ್ಯು.ಎಮ್.ಐ) ಹಾಗೂ ಅದರ ಸಹಭಾಗಿ ಸಂಸ್ಥೆಗಳು Informing Change in the Indus Basin (ICIB) Media Fellowshipಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.  ಅದನ್ನು ಕುರಿತಾದ ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿhttp://bit.ly/29eZCM9 (http://www.indiawaterportal.org/opportunities/call-media-fellowship-informing-change-indus-basin)

ಅರ್ಜಿಗಳನ್ನು ಕಳುಹಿಸಲು ಕೊನೆಯ ದಿನಾಂಕ: ಆಗಸ್ಟ್ ೧, ೨೦೧೬

 

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*