ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ಕೆರೆನೋಟ – ಕೆರೆನೋಟ-69 ಆಗ ಹೀಗಿದ್ದವು… ಜೀವಂತ ಕೆರೆಗಳು! – 7

ಲಕ್ಷ್ಮಣರಾವ್ ಅವರು ನೀಡಿದ ವರದಿಯಲ್ಲಿ ಬೆಂಗಳೂರಿನ ಜೀವಂತ ಕೆರೆಗಳು ಹೇಗಿದ್ದವು ಎಂದು ಹೇಳಲಾಗಿದೆ. ಇದೀಗ ಜೀವಂತ ಕೆರೆಗಳ ಪರಿಸ್ಥಿತಿಯ ಹೇಗಿತ್ತು, ಅದನ್ನು ಏನು ಮಾಡಬಹುದು ಎಂಬ ಶಿಫಾರಸುಗಳನ್ನೂ ನೀಡಲಾಗಿದೆ. ಅಂತಹ 81 ಕೆರೆಗಳ ಪಟ್ಟಿಯ ವಿವರಣೆ ಹೀಗೆ ಸಾಗುತ್ತದೆ….

ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳು

  1. ಮಡಿವಾಳ ಕೆರೆ

ಮಡಿವಾಳ ಕೆರೆ ಮಡಿವಾಳದ ಸಮೀಪವಿದ್ದು, ಇದು ಬಿಡಿಎದ ಬಿಡಿಎಂ ಬಡಾವಣೆಯೊಳಗೆ ಇದೆ. 275 ಸಂಖ್ಯೆಯಲ್ಲಿ ನೋಂದಣಿಯಾಗಿರುವ ಮಡಿವಾಳ ಕೆರೆ, 114.16 ಹೆಕ್ಟೇರ್ ಪ್ರದೇಶದಲ್ಲಿದೆ. ಅತಿಹೆಚ್ಚು ನೀರಿರುವ ಅತಿDSC_0102ದೊಡ್ಡ ಕೆರೆ ಇದಾಗಿದೆ. ಬಿಟಿಎಂ ಬಡಾವಣೆಯ ಅಭಿವೃದ್ಧಿಯಲ್ಲಿ ಈ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ, ಜಲಮೂಲವನ್ನು ಉಳಿಸಿಕೊಳ್ಳಬೇಕು ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆಯ ತೀರದ ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಇಲ್ಲಿರುವ ಜಲಮೂಲವನ್ನು ಉಳಿಸಿಕೊಳ್ಳಬೇಕು. ಕೆಎಸ್ ಡಿ.ಸಿ ವತಿಯಿಂದ ಪ್ರವಾಸಿ ಸೌಲಭ್ಯವನ್ನು ಒದಗಿಸಬಹುದು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆ ಮತ್ತು ಕೆಎಸ್.ಡಿ.ಸಿ. ಸ್ವಾಧೀನದಲ್ಲಿದೆ.

  1. ಕೊದಗಿನ ಕೆರೆ- ಶಿಂಗಸಂದ್ರ

ಶಿಂಗಸಂದ್ರದ ಸಮೀಪವಿರುವ ಹೊಸೂರು ರಸ್ತೆಗೆ ಹೊಂದಿಕೊಂಡಂತಿರುವ ಶಿಂಗಸಂದ್ರ ಅಥವಾ ಕೊದಗಿನ ಕೆರೆ 238ನೇ ಸಂಖ್ಯೆಯಲ್ಲಿ ನೋಂದಣಿಯಾಗಿದ್ದು, 8.71 ಹೆಕ್ಟೇರ್ ಪ್ರದೇಶದಲ್ಲಿದೆ. ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆಯ ತೀರದ ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಮತ್ತು ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.

  1. ಆಲಹಳ್ಳಿ ಕೆರೆ

ಬನ್ನೇರುಘಟ್ಟ ರಸ್ತೆಯ ಪಶ್ಚಿಮಕ್ಕೆ ಮತ್ತು ಆಲಹಳ್ಳಿಯ ಒಳಭಾಗಲದಲ್ಲಿ ಇರುವ ಆಲಹಳ್ಳಿ ಕೆರೆ 6.13 ಹೆಕ್ಟೇರ್ ವಿಸ್ತೀರ್ಣದಲ್ಲಿದ್ದು, 771 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಸಿಡಿಪಿಯಲ್ಲಿ ವಸತಿ ಪ್ರದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ. ಈ ಕೆರೆ ಪ್ರದೇಶವನ್ನು ವೃಕ್ಷವನವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಕೆರೆಯ ಸುಪರ್ದಿ ಹೊಂದಿದೆ.

  1. ಸುಬ್ಬರಾಯನಕೆರೆ-ದೊಡ್ಡ ಕಲ್ಲಸಂದ್ರ

ದೊಡ್ಡಕಲ್ಲಸಂದ್ರದ ಒಳಭಾಗದಲ್ಲಿರುವ ಸುಬ್ಬರಾಯನ ಕೆರೆ1.13 ಹೆಕ್ಟೇರ್ ವಿಸ್ತೀರ್ಣ ಹೊಂದಿದ್ದು, 768 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶದಲ್ಲಿಯೂ ವಸತಿ ಪ್ರದೇಶ ಮಾಡಲು ಸಾಧ್ಯವಿಲ್ಲ ಎಂದು ಸಿಡಿಪಿ ಹೇಳಿದೆ. ಈ ಕೆರೆ ಪ್ರದೇಶವನ್ನು ವೃಕ್ಷವನವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಕೆರೆಯ ಸುಪರ್ದಿ ಹೊಂದಿದೆ.

  1. ಮಾಚಿಕೆರೆ- ದೊಡ್ಡಕಲ್ಲಸಂದ್ರ

ಕನಕಪುರ ರಸ್ತೆಯ ಪಶ್ಚಿಮ ಭಾಗದತ್ತ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತಿರುವ ದೊಡ್ಡಕಲ್ಲಸಂದ್ರದ ಮಾಚಿ ಕೆರೆ 8.87 ಹೆಕ್ಟೇರ್ ವಿಸ್ತೀರ್ಣದಲ್ಲಿದೆ. ಈ ಕೆರೆ 767 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆ ತೀರದ ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿ ಹೊಂದುವ ಸಮಯದಲ್ಲಿ ಇಲ್ಲಿ ವೃಕ್ಷವನವನ್ನೂ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಈ ಕೆರೆಯ ಮಾಲೀಕತ್ವ ಹೊಂದಿದೆ.

  1. ಕೋಣನಕುಂಟೆ ಕೆರೆ

ಕನಕಪುರ ರಸ್ತೆಗೆ ಹೊಂದಿಕೊಂಡಂತೆ ಕೈಗಾರಿಕೆ ಪ್ರದೇಶ ಬಳಿ ಇರುವ ಕೋಣನಕುಂಟೆ ಕೆರೆ 269 ಸಂಖ್ಯೆಯಲ್ಲಿ ನೋಂದಣಿಯಾಗಿದ್ದು, 3.71 ಹೆಕ್ಟೇರ್ ಪ್ರದೇಶದಲ್ಲಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಇಲ್ಲಿ ವೃಕ್ಷವನವನ್ನೂ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಈ ಕೆರೆಯ ಮಾಲೀಕತ್ವ ಹೊಂದಿದೆ.

ಲಕ್ಷ್ಮಣರಾವ್ ವರದಿಯಲ್ಲಿನ ಜೀವಂತ ಕೆರೆಗಳಲ್ಲಿ ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆ ಭಾಗ ಹಾಗೂ ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಮಧ್ಯಭಾಗದಲ್ಲಿರುವ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳ ಮಾಹಿತಿಯನ್ನು ನೀಡಲಾಯಿತು. ಈಗ ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳ ವಿವರ ನೀಡಲಾಗುತ್ತಿದೆ. ಮುಂದಿನ ನೋಟದಲ್ಲಿ ಇನ್ನಷ್ಟು ಕೆರೆಗಳ ಮಾಹಿತಿ ನೀಡಲಾಗುತ್ತದೆ.

 (ಮುಂದುವರಿಯಲಿದೆ)

ಚಿತ್ರ-ಲೇಖನ: ಕೆರೆ ಮಂಜುನಾಥ್

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*